ಬಾಲ ಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

Update: 2022-03-26 15:07 GMT

ಉಡುಪಿ : ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವತಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡೆ, ನೃತ್ಯ, ಸಂಗೀತ, ಸಾಹಿತ್ಯ, ಕರಕುಶಲ, ಚಿತ್ರಕಲೆ ಕ್ಷೇತ್ರಗಳಲ್ಲಿ ಹಾಗೂ ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಶಸ್ತಿ ಪುರಸ್ಕೃತ ಮಕ್ಕಳು ಸ್ವಯಂ ದೃಢೀಕೃತ ನಕಲು, ಸ್ವವಿವರ, ದಾಖಲೆಗಳೊಂದಿಗೆ ಹಾಗೂ 2021ರ ಜನವರಿಯಿಂದ ಡಿಸೆಂಬರ್‌ವರೆಗೆ ಪ್ರಕಟಗೊಂಡ ಸ್ವ-ರಚಿತ ಮಕ್ಕಳ ಸಾಹಿತ್ಯ ಕೃತಿಗಳ (ಮಕ್ಕಳೇ ರಚಿಸಿದ) ೪ ಪ್ರತಿಯೊಂದಿಗೆ ಮಾ.೩೧ರೊಳಗೆ  ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ- ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ- ೫೮೦೦೦೪ ವಿಳಾಸಕ್ಕೆ ಕಳುಸಬೇಕು. ಅರ್ಜಿ ಸಲ್ಲಿಸುವಾಗ ಅಕಾಡೆಮಿ ಬಾಲಗೌರವ ಪ್ರಶಸ್ತಿಗೆ ಅರ್ಜಿ ಎಂದು ಲಕೋಟೆ ಮೇಲೆ ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂ:೦೮೩೬-೨೪೬೧೬೬೬ನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News