ವಸತಿ ಯೋಜನೆಗೆ ಅವಧಿ ವಿಸ್ತರಣೆ
Update: 2022-03-29 13:53 GMT
ಉಡುಪಿ : ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿ ಯಿಂದ ಪ್ರಸಕ್ತ ಸಾಲಿನಲ್ಲಿ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ನಿವೇಶನವಿರುವ ವಸತಿ ರಹಿತ ಫಲಾನುಭವಿಗಳು, ವಸತಿ ಯೋಜನೆಗೆ ಆನ್‌ಲೈನ್ - www.adcl.karnataka.gov.in-ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.