ಕ್ರೀಡಾಪಟು ಮಾಧುರ್ಯಾ ಶೆಟ್ಟಿಗೆ ಸಹಾಯಧನ ವಿತರಣೆ

Update: 2022-03-29 13:58 GMT

ಉಡುಪಿ : ಫ್ರಾನ್ಸ್‌ನಲ್ಲಿ ನಡೆಯಲಿರುವ ಕ್ರಿಡಾಕೂಟಕ್ಕೆ ಆಯ್ಕೆಯಾಗಿ ರುವ ಉಡುಪಿ ಜಿಲ್ಲೆಯ ಗ್ರಾಮೀಣ ಪ್ರತಿಭೆ ಮಾಧುರ್ಯಾ ಶೆಟ್ಟಿ ಇವರಿಗೆ ಬಂಟರ ಸಂಘದ ವತಿಯಿಂದ ಧನ ಸಹಾಯ ವಿತರಣಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಕ್ರಿಡಾಂಗಣದಲ್ಲಿ ಮಂಗಳವಾರ ನಡೆಯಿತು.

ಉಡುಪಿ ಜಿಲ್ಲಾ ಬಂಟರ ಸಂಘದ ಗೌರವಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಾಧುರ್ಯ ಶೆಟ್ಟಿ ಅಪ್ಪಟ ಗ್ರಾಮೀಣ ಪ್ರತಿಭೆಯಾಗಿದ್ದರೂ ಸಹ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಅವರು ತಮ್ಮ ಸ್ವಂತ ಶ್ರಮದಿಂದ ಈ ಮಟ್ಟಕ್ಕೆ ಬೆಳೆದಿದ್ದಾರೆ. ವಿದ್ಯಾರ್ಥಿಗಳು ನಿರಂತರವಾಗಿ ತಮ್ಮ ಪ್ರಯತ್ನವನ್ನು ಮಾಡುತ್ತಲೇ ಇರಬೇಕು ಎಂದರು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘದ ವತಿಯಿಂದ ೫೦ ಸಾವಿರ ರೂ. ಮತ್ತು ಉಡುಪಿ ಬಂಟರ ಸಂಘದಿಂದ ೨೫ ಸಾವಿರ ರೂ. ಸಹಾಯಧನ ವನ್ನು ಕ್ರೀಡಾಪಟು ಮಾಧುರ್ಯ ಶೆಟ್ಟಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕಾರ್ಯದರ್ಶಿ ಅಮಿತ್ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಮನೋಹರ್ ಶೆಟ್ಟಿ ತೋನ್ಸೆ, ಉಪಾಧ್ಯಕ್ಷ ಮೋಹನ್ ಶೆಟ್ಟಿ ಉಡುಪಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಲಿಂಗರಾಜು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News