ಉಡುಪಿ ಜಿಲ್ಲೆಯಲ್ಲಿ ನಾಲ್ವರು ಕೋವಿಡ್‌ ನಿಂದ ಗುಣಮುಖ

Update: 2022-03-29 15:54 GMT

ಉಡುಪಿ : ಜಿಲ್ಲೆಯಲ್ಲಿ ಇಂದು ಸಹ ಯಾರಲ್ಲೂ ಕೋವಿಡ್-೧೯  ಸೋಂಕು ಪತ್ತೆಯಾಗಿಲ್ಲ. ಆದರೆ ಈಗಾಗಲೇ ಸೋಂಕಿಗೆ ಸಕ್ರಿಯರಾಗಿರುವ 9 ಮಂದಿಯಲ್ಲಿ ನಾಲ್ವರು ಇಂದು ಸಂಪೂರ್ಣ ಗುಣಮುಖರಾಗಿದ್ದು, ಐವರು ಮಾತ್ರ ಈಗಲೂ ಚಿಕಿತ್ಸೆಯಲ್ಲಿದ್ದಾರೆ.   

ದಿನದಲ್ಲಿ ಒಟ್ಟು 185 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಉಡುಪಿ ತಾಲೂಕಿನ ೧೪೯ ಮಂದಿ, ಕುಂದಾಪುರದ ೨೮ ಹಾಗೂ ಕಾರ್ಕಳ ತಾಲೂಕಿನ ಎಂಟು ಮಂದಿಯಲ್ಲಿ ಯಾರೂ ಸೋಂಕಿತರು ಪತ್ತೆಯಾಗಿಲ್ಲ.  

ದಿನದಲ್ಲಿ ನಾಲ್ವರು ಗುಣಮುಖರಾಗಿರುವುರಿಂದ ಐವರು ಮಾತ್ರ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಹಾಗೂ ಉಳಿದವರು ಅವರವರ ಮನೆಗಳಲ್ಲಿ ಚೇತರಿಸಿಕೊಳ್ಳುತಿದ್ದಾರೆ. ಜ.೧ರ ನಂತರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ ೧೮,೪೩೬ ಆದರೆ, ಚೇತರಿಸಿ ಕೊಂಡವರ ಸಂಖ್ಯೆ ೧೮೪೯೮ ಆಗಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ. 

೧೯೧ ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ೧೨ರಿಂದ ೧೪ವರ್ಷದೊಳಗಿನ ಒಟ್ಟು ೧೯೧ ಮಕ್ಕಳಿಗೆ ಕೋವಿಡ್‌ನ ಮೊದಲ ಡೋಸ್ ಲಸಿಕೆಯನ್ನು ನೀಡಲಾ ಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೭,೫೯೫ ಮಕ್ಕಳು ಈ ಲಸಿಕೆಯನ್ನು ಪಡೆದಂತಾಗಿದೆ.

ದಿನದಲ್ಲಿ ಒಟ್ಟು ೯೪೭ ಮಂದಿ ಇಂದು ಲಸಿಕೆಯನ್ನು ಪಡೆದು ಕೊಂಡಿದ್ದಾರೆ. ೬೦ ವರ್ಷ ಮೇಲಿನ ೩೧೩ ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ೩೩೭ ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆ ಪಡೆದರೆ, ಒಟ್ಟು ೨೦೫ ಮಂದಿ ಮೊದಲ ಡೋಸ್ ಹಾಗೂ ೪೦೫ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News