ರಂಗಮಂದಿರ ಕಾಮಗಾರಿ ಆರಂಭಿಸಲು ಸಚಿವ ಸುನೀಲ್ ಸೂಚನೆ

Update: 2022-03-30 15:26 GMT

ಉಡುಪಿ : ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ಕಾಮ ಗಾರಿಯನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ ಶಾಸಕ ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಉದಯ ಕುಮಾರ್ ಶೆಟ್ಟಿ ಕಿದಿಯೂರು ಅವರೊಂದಿಗೆ ಉಡುಪಿ ರಂಗಭೂಮಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ಸೇರಿದಂತೆ ನಿಯೋಗ ಬುಧವಾರ ಬೆಂಗಳೂರು ವಿಧಾನ ಸೌಧದಲ್ಲಿ ಸಚಿವ ಸುನಿಲ್ ಕುಮಾರ್ ಅವರನ್ನು ಭೇಟಿ ಮಾಡಿತು.

ನಿಯೋಗ ಉಡುಪಿ ಜಿಲ್ಲಾ ರಂಗಮಂದಿರ ನಿರ್ಮಾಣದ ತುರ್ತು ಅಗತ್ಯತೆ ಯನ್ನು ಸಚಿವರಿಗೆ ತಿಳಿಸಿದ್ದು, ಸಚಿವರು ಈ ಕೂಡಲೇ, ಆರಂಭಿಕವಾಗಿ ಎರಡು ಕೋಟಿ ರೂ. ಅನುದಾನವನ್ನು ಇಲಾಖೆಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳು ವಂತೆ ಹಾಗೂ ಸುಮಾರು ೧೨ ವರ್ಷದ ಹಿಂದೆಯೇ ಸರಕಾರದಿಂದ ಬಿಡುಗಡೆ ಆಗಿ ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿರುವ 50 ಲಕ್ಷ ರೂ. ಅನುದಾನದೊಂದಿಗೆ ಜಿಲ್ಲಾ ರಂಗಮಂದಿರ ಕಾಮಗಾರಿಯನ್ನು ಆದಷ್ಟು ಶೀಘ್ರ ವಾಗಿ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News