ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ 217 ಮಂದಿ ಗೈರು

Update: 2022-03-30 16:18 GMT

ಉಡುಪಿ : ಜಿಲ್ಲೆಯ 56 ರೆಗ್ಯೂಲರ್ ಹಾಗೂ 2 ಖಾಸಗಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು 58 ಕೇಂದ್ರಗಳಲ್ಲಿ ಬುಧವಾರ ನಡೆದ ಎಸೆಸೆಲ್ಸಿ ದ್ವಿತೀಯ ಭಾಷಾ ಪರೀಕ್ಷೆಯಲ್ಲಿ ಒಟ್ಟು 217 ಮಂದಿ ಗೈರುಹಾಜರಾಗಿದ್ದರು.

ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ೧೩೯೫೧ ವಿದ್ಯಾರ್ಥಿಗಳ ಪೈಕಿ ೧೩,೭೩೪ ಮಂದಿ ಪರೀಕ್ಷೆ ಬರೆದಿದ್ದು, ೨೧೭ ಮಂದಿ ಗೈರಾಗಿದ್ದರು. ಈ ಸಂದರ್ಭದಲ್ಲಿ ೧೦ ಮಂದಿ ವಿದ್ಯಾರ್ಥಿಗಳು ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ಬರೆದಿದ್ದು, ಕೋವಿಡ್ ಕೇರ್ ಸೆಂಟರ್‌ನಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆ ಬರೆದಿಲ್ಲ.

ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಒಟ್ಟು ೧೯ ಪರೀಕ್ಷಾ ಕೇಂದ್ರಗಳಲ್ಲಿ ಶೂನ್ಯ ಗೈರುಹಾಜರಿ ಇತ್ತು. ಸಂಚಾರಿ ವಿಚಕ್ಷಣಾ ದಳ, ಸ್ಥಾನಿಕ ಜಾಗೃತ ದಳ, ಜಿಲ್ಲಾ ಹಾಗೂ ತಾಲೂಕು ಉಸ್ತುವಾರಿ ಅಧಿಕಾರಿಗಳೊಂದಿಗೆ ಎಲ್ಲಾ ಶಿಕ್ಷಕರು ಕಾರ್ಯತತ್ವರತೆಯಿಂದ ಕಾರ್ಯ ನಿರ್ವಹಿಸಿದರು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News