ಕುಂದಾಪುರ: ಕಳೀನಜೆಡ್ಡು ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಮೃತ್ಯು

Update: 2022-03-31 13:24 GMT

ಕುಂದಾಪುರ: ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ‌ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ‌ ಮುಳುಗಿ ಮೃತಪಟ್ಟ ದಾರುಣ ಘಟನೆ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ಗುರುವಾರ ನಡೆದಿದೆ.

ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಮೃತ ವಿದ್ಯಾರ್ಥಿಗಳು.

ಘಟನೆ ವಿವರ

ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ಹೊಳೆ ಬಳಿ ತೆರಳಿದ್ದು ಸ್ನಾನಕ್ಕೆಂದು ನೀರಿಗಿಳಿದಾಗ ಸೆಳೆತಕ್ಕೆ ಒಳಗಾಗಿ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ. ಇದನ್ನು ಕಂಡ ವ್ಯಕ್ತಿಯೊಬ್ಬರ ಮಾಹಿತಿಯಂತೆ ಸ್ಥಳೀಯರು ರಕ್ಷಿಸಲು ಮುಂದಾದರೂ‌ ಕೂಡ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಅಮಾಸೆಬೈಲು ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News