ಉಡುಪಿ: ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ ಎ.3ಕ್ಕೆ ಉದ್ಘಾಟನೆ

Update: 2022-03-31 14:02 GMT

ಉಡುಪಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ, ಜಿಲ್ಲಾಡಳಿತ, ಜಿಪಂ ಉಡುಪಿ, ತಾಪಂ ಕಾರ್ಕಳ ಹಾಗೂ ಗ್ರಾಮ ಪಂಚಾಯತ್ ನಿಟ್ಟೆ ಕಾರ್ಕಳ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಿರ್ಮಾಣವಾದ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದ (ಎಂಆರ್‌ಎಫ್) ಉದ್ಘಾಟನೆ ಎ.೩ರಂದು ಬೆಳಗ್ಗೆ 9 ಗಂಟೆಗೆ ನಿಟ್ಟೆ ಗ್ರಾಪಂನ ಪದವು ಎಂಆರ್‌ಎಫ್ ಕೇಂದ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದಾರೆ. ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅಭಿವೃದ್ಧಿ ಕಾರ್ಯಕ್ರಮಗಳ ಪುಸ್ತಕ ಬಿಡುಗಡೆ ಮಾಡಲಿರುವರು. ರಾಜ್ಯ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಗೋಬರ್‌ಧನ್ ಘಟಕ ಉದ್ಘಾಟಿಸ ಲಿದ್ದಾರೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಸ್ತು ಪ್ರದರ್ಶನ ಮಳಿಗೆಗಳಿಗೆ ಚಾಲನೆ ನೀಡಲಿದ್ದಾರೆ. ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕರು, ಜನಪ್ರತಿನಿಧಿಗಳು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಮಣಿರಾಜ್ ಶೆಟ್ಟಿ, ನಿಟ್ಟೆ ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಆತೀಕ್ ಎಲ್.ಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್, ಬಿ.ಬಿ.ಎಂ.ಪಿ ವಿಶೇಷ ಆಯುಕ್ತರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕಿ ಶಿಲ್ಪಾ ಶರ್ಮಾ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News