ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
Update: 2022-04-01 16:10 GMT
ಹಿರಿಯಡ್ಕ : ಮೂತ್ರದ ಸಮಸ್ಯೆಯಿಂದ ಬಳಲುತ್ತಿದ್ದ ೪೧ನೇ ಶಿರೂರು ಗ್ರಾಮದ ಕೋಡಿ ಮನೆ ನಿವಾಸಿ ಗೋಪಾಲ(೭೬) ಎಂಬವರು ಮಾನಸಿಕವಾಗಿ ನೊಂದು ಎ.೧ರಂದು ಬೆಳಗ್ಗೆ ಮನೆಯ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗೊಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಗುಜ್ಜಾಡಿ ನಿವಾಸಿ ರಘುನಾಥ ಮೇಸ್ತ(೬೦) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮಾ.೩೦ರಂದು ರಾತ್ರಿ ಹೊಸಾಡು ಗ್ರಾಮದ ಅರಾಟೆ ಸೇತುವೆಯಿಂದ ಕೆಳಗೆ ಸೌಪರ್ಣಿಕಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ: ಅನಾರೋಗ್ಯದಿಂದ ಬಳಲುತ್ತಿದ್ದ ಸಾಲಿಗ್ರಾಮ ಗೆಂಡೆಕೆರೆ ನಿವಾಸಿ ಅನಂತ ಗಾಣಿಗ(೭೮) ಎಂಬವರು ಮಾ.೩೧ರಂದು ರಾತ್ರಿ ಮನೆಯ ಬಾವಿಯ ಅಡ್ಡ ದಿಂಡಿನ ಕಬ್ಬಿಣದ ರಾಡಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.