ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಪರ್ಮಕ ಜಾರಿಯಾಗಲಿ: ಮ್ಯಾಥ್ಯೂ ಅರ್ಚಿಬಾಲ್

Update: 2022-04-03 12:35 GMT

ಉಡುಪಿ : ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿ ಯಾಗುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು  ಸಿಎಸ್‌ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿಸೋಜ ಹೇಳಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಉಡುಪಿಯ ಪೊಲೀಸ್ ಕವಾಯತು ಮೈದಾನ(ಚಂದು ಮೈದಾನ)ದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತಿದ್ದರು.

ನಿವೃತ್ತ ಪೊಲೀಸರಿಗೆ ಒದಗಿಸಿರುವ ಆರೋಗ್ಯ ಭಾಗ್ಯ ಯೋಜನೆಯನ್ನು ನಿರ್ದಿಷ್ಟ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಜಾರಿಗೊಳಿಸಿದ್ದು, ಚಿಕಿತ್ಸೆ ನೀಡುವ ಆಸ್ಪತ್ರೆಗಳ ಸಂಖ್ಯೆಯನ್ನು ವಿಸ್ತರಿಸಬೇಕು. ಅಲ್ಲದೇ ೧ ಲಕ್ಷ ರೂ.ಗಳಿಗೆ ಸೀಮಿತ ಗೊಳಿಸಿರುವ ಚಿಕಿತ್ಸಾ ವೆಚ್ಚವನ್ನು ಹೆಚ್ಚಿಸಬೇಕು. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಪೊಲೀಸ್ ಧ್ವಜ ಬಿಡುಗಡೆ ಮತ್ತು ನಿವೃತ್ತ ಪೊಲೀಸ್  ಅಧಿಕಾರಿ ಮತ್ತು ಸಿಬ್ಬಂದಿಗೆ ಕ್ಷೇಮ ನಿಧಿಯ ಚೆಕ್‌ಗಳನ್ನು ವಿತರಿಸಲಾಯಿತು. ಆಕರ್ಷಕ ಪಥ ಸಂಚಲನ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿದರು. ಹೆಚ್ಚುವರಿ ಎಸ್ಪಿ ಎಸ್.ಟಿ.ಸಿದ್ದಲಿಂಗಪ್ಪ ವಂದಿಸಿ ದರು. ಉಡುಪಿ ಸೆನ್ ಪೊಲೀಸ್ ಠಾಣಾ ನಿರೀಕ್ಷಕ ಮಂಜುನಾಥ್ ಕಾರ್ಯ ಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News