ಬೈಕ್‍ ಅಪಘಾತ: ಎಸೆಸೆಲ್ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿ ಮೃತ್ಯು, ಇಬ್ಬರಿಗೆ ಗಾಯ

Update: 2022-04-04 06:15 GMT
ಸಾಂದರ್ಭಿಕ ಚಿತ್ರ

ಕುಣಿಗಲ್, ಎ.4: ಬೈಕ್ ಅಪಘಾತಕ್ಕೀಡಾಗಿ ಎಸೆಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟು, ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ನವೀನ್ (16) ಮೃತಪಟ್ಟ ವಿದ್ಯಾರ್ಥಿ. ಜೊತೆಗಿದ್ದ ಶರತ್ ಮತ್ತು ದರ್ಶನ್​ ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳಾಗಿರುವ ಈ ಮೂವರು ಬಾಲಕರು ಇಂದು ನಡೆಯಲಿದ್ದ ಎಸೆಸೆಲ್ಸಿ ಗಣಿತ ಪರೀಕ್ಷೆ ಬರೆಯಲೆಂದು ಅಮೃತನೂರು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಒಂದೇ ಬೈಕಿನಲ್ಲಿ ಮೂವರು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ನವೀನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ  ಅಮೃತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News