ಜೆಸಿಬಿ- ಬೈಕ್ ಢಿಕ್ಕಿ: ಸವಾರ ಮೃತ್ಯು
Update: 2022-04-05 15:11 GMT
ಕಾರ್ಕಳ : ಜೆಸಿಬಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಾಣೂರು ಗ್ರಾಮದ ಬೀಜೋತ್ಪಾದನಾ ಕೇಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ ೧೬೯ರಲ್ಲಿ ಎ.೪ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಅವಿನಾಶ್ ವಿ.(30) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆ ಯಿಂದ ಮೂಡಬಿದ್ರೆ ಕಡೆಗೆ ಹೋಗುತ್ತಿದ್ದ ಬೈಕ್, ಮೂಡಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಜೆಸಿಬಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಜೆಸಿಬಿಯ ಅಡಿಯಲ್ಲಿ ಸಿಲುಕಿ ಗಂಭೀರ ಗಾಯಗೊಂಡ ಅವಿನಾಶ್ ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.