ಉಡುಪಿ ಜಿಲ್ಲೆಯಲ್ಲಿ ಒಬ್ಬರೇ ಕೋವಿಡ್‌ಗೆ ಸಕ್ರಿಯ

Update: 2022-04-05 15:43 GMT

ಉಡುಪಿ : ಜಿಲ್ಲೆಯಲ್ಲಿ ಇಂದು ಸಹ ಯಾವುದೇ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿಲ್ಲ. ನಿನ್ನೆ ಇಬ್ಬರು ಸೋಂಕಿನಿಂದ ಗುಣಮುಖರಾಗುವ ಮೂಲಕ ಇದೀಗ ಒಬ್ಬರು ಮಾತ್ರ ಕೋವಿಡ್ ಸಕ್ರಿಯರು ಉಳಿದಿದ್ದಾರೆ. ಅವರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಮಂಗಳವಾರ ಒಟ್ಟು 94 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸ ಲಾಗಿತ್ತು. ಉಡುಪಿ ತಾಲೂಕಿನ ೭೬, ಕುಂದಾಪುರದ ೧೦ ಹಾಗೂ ಕಾರ್ಕಳ ತಾಲೂಕಿನ ೮ ಮಂದಿಯಲ್ಲಿ ಯಾರೂ ಸೋಂಕಿತರು ಪತ್ತೆಯಾಗಿಲ್ಲ.  
ಜ.೧ರ ನಂತರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ ೧೮,೪೩೮ ಆದರೆ, ಚೇತರಿಸಿಕೊಂಡವರ ಸಂಖ್ಯೆ ೧೮೫೦೪ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ. 

೯೨೩ ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ೧೨ರಿಂದ ೧೪ವರ್ಷದೊಳಗಿನ ಒಟ್ಟು ೯೨೩ ಮಕ್ಕಳಿಗೆ ಕೋವಿಡ್‌ನ ಮೊದಲ ಡೋಸ್ ಲಸಿಕೆಯನ್ನು ನೀಡಲಾ ಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೨೬೪೨೫ ಮಕ್ಕಳು ಈ ಲಸಿಕೆಯನ್ನು ಪಡೆದಂತಾಗಿದೆ.

ದಿನದಲ್ಲಿ ಒಟ್ಟು ೧೫೫೩ ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ೬೦ ವರ್ಷ ಮೇಲಿನ ೪೭೧ ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ೪೮೭ ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆ ಪಡೆದರೆ, ಒಟ್ಟು ೯೪೪ ಮಂದಿ ಮೊದಲ ಡೋಸ್ ಹಾಗೂ ೧೨೨ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News