ಉಡುಪಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

Update: 2022-04-07 14:28 GMT

ಉಡುಪಿ : ಕೃಷಿ ಇಲಾಖೆ ವತಿಯಿಂದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಯ ೪ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಹಾರ ತಂತ್ರಜ್ಞಾನ, ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ಹಾಗೂ ಪದವಿ ಹೊಂದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು ೩ರಿಂದ ೫ ವರ್ಷಗಳ ಅನುಭವ ಹೊಂದಿರುವ ಹಾಗೂ ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ಧಪಡಿಸುವಿಕೆ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಎ.೨೫ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಜಿಲ್ಲಾ ಆಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಕಛೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News