ಎ. 14ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ

Update: 2022-04-08 14:17 GMT

ಉಡುಪಿ, ಎ.೮: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಜಿಲ್ಲೆಯ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಸಂಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಎ.೧೪ರಂದು ಬೆಳಗ್ಗೆ ೯:೩೦ಕ್ಕೆ ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News