ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Update: 2022-04-08 14:18 GMT

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-೨ ಹುದ್ದೆ ಮತ್ತು ಅಂಗನವಾಡಿ ಸಹಾಯಕಿಯರ-೩೫ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

೧೮ರಿಂದ ೩೫ ವರ್ಷದೊಳಗಿನ ಎಸೆಸೆಲ್ಸಿ ತೇರ್ಗಡೆಗೊಂಡ ಸ್ಥಳೀಯ ಅಭ್ಯರ್ಥಿಗಳು ಕಾರ್ಯಕರ್ತೆ ಹುದ್ದೆಗೆ ಹಾಗೂ ಕನಿಷ್ಠ ೪ನೇ ತರಗತಿ ತೇರ್ಗಡೆಯಾಗಿರುವ ಸ್ಥಳೀಯ ಅಭ್ಯರ್ಥಿಗಳು ಸಹಾಯಕಿಯರ ಹುದ್ದೆಗೆ ಮೇ ೨ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್‌ಸೈಟ್:    http://udupi.nic.in- ಅಥವಾ ಉಡುಪಿ ದೂ.ಸಂಖ್ಯೆ: ೦೮೨೦-೨೫೨೪೦೫೫, ಬ್ರಹ್ಮಾವರ ದೂ.ಸಂಖ್ಯೆ: ೦೮೨೦-೨೫೬೨೨೪೪, ಕುಂದಾಪುರ ದೂ.ಸಂಖ್ಯೆ: ೦೮೨೫೪-೨೩೦೮೦೭ ಹಾಗೂ ಕಾರ್ಕಳ ದೂ.ಸಂಖ್ಯೆ: ೦೮೨೫೮-೨೩೦೯೯೨ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News