ಉಡುಪಿ: ಎ.11ಕ್ಕೆ ಮುಖ್ಯಮಂತ್ರಿಗಳಿಂದ ಕೇಂದ್ರ ಗ್ರಂಥಾಲಯ ಕಟ್ಟಡ ಉದ್ಘಾಟನೆ

Update: 2022-04-09 15:50 GMT

ಉಡುಪಿ : ಸಾರ್ವಜನಿಕ ಗ್ರಂಥಾಲಯ ಇಲಾಖೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಉಡುಪಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಕಟ್ಟಡದ ಉದ್ಘಾಟನೆ ಎ.11ರಂದು ಅಪರಾಹ್ನ 2.30ಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ನಡೆಯಲಿದೆ.

ಇದರೊಂದಿಗೆ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ, ಡಿಜಿಟಲ್ ಗ್ರಂಥಾಲಯ ಹಾಗೂ ಡಾ.ಬನ್ನಂಜೆ ಗೋವಿಂದಾಚಾರ್ಯರ ಪುತ್ಥಳಿಯ ಅನಾವರಣವೂ ಮುಖ್ಯಮಂತ್ರಿಗಳಿಂದ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರೊಂದಿಗೆ  ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥರೂ ಪಾಲ್ಗೊಳ್ಳಲಿದ್ದಾರೆ.

ಉಡುಪಿಯ ಅಜ್ಜರಕಾಡು ಪುರಭವನ ಬಳಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾಗವಹಿಸಲಿದ್ದಾರೆ. ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News