ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಶೂನ್ಯ ಸೋಂಕಿತರು

Update: 2022-04-09 16:06 GMT

ಉಡುಪಿ‌ : ಜಿಲ್ಲೆಯಲ್ಲಿ ಶನಿವಾರ ಸಹ ಯಾವುದೇ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಈಗ ಉಳಿದಿರುವ ಏಕೈಕ ಕೋವಿಡ್ ಸೋಂಕಿತರು ತಮ್ಮ ಮನೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಇಂದು ಒಟ್ಟು 62 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಉಡುಪಿ ತಾಲೂಕಿನ 48, ಕುಂದಾಪುರದ ೯ ಹಾಗೂ ಕಾರ್ಕಳ ತಾಲೂಕಿನ ಐವರಲ್ಲಿ ಯಾರೂ ಸೋಂಕಿತರು ಪತ್ತೆಯಾಗಿಲ್ಲ.  

191 ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು 12ರಿಂದ 14ವರ್ಷದೊಳಗಿನ ಒಟ್ಟು 191 ಮಕ್ಕಳಿಗೆ ಕೋವಿಡ್‌ನ ಮೊದಲ ಡೋಸ್ ಲಸಿಕೆಯನ್ನು ನೀಡಲಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೨೮೪೨೫ ಮಕ್ಕಳು ಈ ಲಸಿಕೆಯನ್ನು ಪಡೆದಂತಾಗಿದೆ.

ದಿನದಲ್ಲಿ ಒಟ್ಟು ೪೨೫ ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ೬೦ ವರ್ಷ ಮೇಲಿನ ೧೫೦ ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ೧೫೭ ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆ ಪಡೆದರೆ, ಒಟ್ಟು ೧೯೮ ಮಂದಿ ಮೊದಲ ಡೋಸ್ ಹಾಗೂ ೭೦ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News