ದ್ವಿತೀಯ ಪಿಯುಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2022-04-13 14:56 GMT

ಉಡುಪಿ : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಎ.೨೨ರಿಂದ ಮೇ ೧೮ರವರೆಗೆ ಜಿಲ್ಲೆಯ ೨೮ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯ ದಂತೆ ಸೆಕ್ಷನ್ ೧೪೪(೧)ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಪರೀಕ್ಷೆ ನಡೆಯುವ ವೇಳೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡಲು,  ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಯಲು ಮತ್ತು ನಡೆಯಬಹುದಾದ ಎಲ್ಲಾ ಅವ್ಯವಹಾರಗಳನ್ನು ತಡೆಗಟ್ಟಲು, ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ವೆಂದು ಘೋಷಿಸಿ, ೧೪೪(೧)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News