ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ | ಏಳು ವಿಶೇಷ ತನಿಖಾ ತಂಡ ರಚನೆ: ಎಡಿಜಿಪಿ ಪ್ರತಾಪ್ ರೆಡ್ಡಿ

Update: 2022-04-16 08:05 GMT

ಉಡುಪಿ, ಎ.16: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಏಳು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ.

ಉಡುಪಿ ಎಸ್ಪಿ ಕಚೇರಿಯಲ್ಲಿಂದು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ನಿರ್ದೇಶನ ನೀಡಲು ತಾನು ಉಡುಪಿಗೆ ಬಂದಿದ್ದು, ಎಸ್ಪಿ ನೇತೃತ್ವದಲ್ಲಿ ರಚಿಸಲಾದ ಈ ತಂಡಗಳು ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಸಮಗ್ರ ತನಿಖೆ ನಡೆಸಲಿದೆ. ತನಿಖಾ ತಂಡಗಳ ಮೇಲುಸ್ತುವಾರಿಯನ್ನು ನಾನು ವಹಿಸಿಕೊಂಡಿದ್ದೇನೆ ಎಂದರು

ಸಮಗ್ರವಾಗಿ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮರಣೋತ್ತರ ಪರೀಕ್ಷೆ ವರದಿ, ಎಫ್ಎಸ್ಎಲ್ ವರದಿ ಎಲ್ಲವನ್ನು ಪಡೆದುಕೊಂಡು ಪರಿಶೀಲನೆ ಮಾಡಲಾಗುವುದು. ಅದರ ಬಗ್ಗೆ ಈ ಹಂತದಲ್ಲಿ ಏನು ಹೇಳಲು ಆಗುವುದಿಲ್ಲ ಎಂದು ಅವರು ತಿಳಿಸಿದರು

ವಿಧಿ ವಿಜ್ಞಾನ ಪ್ರಯೋಗಾಲಯವು ಸ್ವತಂತ್ರ ಸಂಸ್ಥೆಯಾಗಿದ್ದು ಅವರೇ ವರದಿಯನ್ನು ನೀಡಲಿದ್ದಾರೆ, ಆದಷ್ಟು ಬೇಗ ವರದಿಗಳನ್ನು ನೀಡುವಂತೆ ಅವರಿಗೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News