ಉತ್ತರಪ್ರದೇಶ: ಒಂದೇ ಕುಟುಂಬದ 5 ಮಂದಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ
ಪ್ರಯಾಗರಾಜ್/ಲಕ್ನೋ:ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ತಮ್ಮ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ನವಾಬ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಖಗಲ್‌ಪುರ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ರಾಹುಲ್ (42 ವರ್ಷ), ಅವರ ಪತ್ನಿ ಪ್ರೀತಿ (38 ವರ್ಷ) ಹಾಗೂ ಅವರ ಪುತ್ರಿಯರಾದ ಮಹಿ (15), ಪಿಹು (13) ಹಾಗೂ ಕುಹು (11) ತಮ್ಮ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವಿಧಿವಿಜ್ಞಾನ ತಂಡ ಹಾಗೂ ಶ್ವಾನದಳವು ತನಿಖೆಗಾಗಿ ಸ್ಥಳಕ್ಕೆ ಧಾವಿಸಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಅಗರ್ವಾಲ್ ತಿಳಿಸಿದ್ದಾರೆ.
ಘಟನೆಯ ಕುರಿತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಬಿಜೆಪಿ ಸರಕಾರದ 2.0 ರ ಆಡಳಿತದಲ್ಲಿ ಉತ್ತರಪ್ರದೇಶ ಅಪರಾಧದಲ್ಲಿ ಮುಳುಗಿದೆ”ಎಂದು ಸುದ್ದಿ ವಾಹಿನಿಯ ಸ್ಕ್ರೀನ್‌ಶಾಟ್‌ನೊಂದಿಗೆ ಹಿಂದಿಯಲ್ಲಿ ಯಾದವ್ ಟ್ವೀಟ್ ಮಾಡಿದ್ದಾರೆ
.