ಬ್ರಹ್ಮಾವರ: ಈಜು ತರಬೇತುದಾರ ಆತ್ಮಹತ್ಯೆ
Update: 2022-06-19 04:46 GMT
ಬ್ರಹ್ಮಾವರ : ಈಜು ತರಬೇತಿದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ವೇಳೆ ಬ್ರಹ್ಮಾವರದಲ್ಲಿ ನಡೆದಿದೆ.
ಮೃತರನ್ನು ಕಾರವಾರದ ಸುರೇಶ ಮಜಳ್ಕರ್ ಎಂಬವರ ಪುತ್ರ ಮಂಜುನಾಥ ಮಜಳ್ಕರ್ ಎಂದು ಗುರುತಿಸಲಾಗಿದೆ.
ಇವರು ಕಳೆದ 4 ತಿಂಗಳಿನಿಂದ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಈಜು ತರಬೇತುದಾರರಾಗಿ ಕೆಲಸ ಮಾಡಿಕೊಂಡಿದ್ದು, ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಕ್ಲಬ್‌ನ ಗ್ರೀನ್ ರೂಮಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.