ಎ.21ರಂದು ರಾಜ್ಯ ಸರಕಾರಿ ನೌಕರರ ದಿನಾಚರಣೆ
ಉಡುಪಿ : ರಾಜ್ಯ ಸರಕಾರಿ ನೌಕರರ ಸಂಘದ ಉಡುಇ ಜಿಲ್ಲಾ ಶಾಖೆ ವತಿಯಿಂದ ಸರಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ ಎ.೨೧ರಂದು ಬೆಳಗ್ಗೆ ೧೦ ಗಂಟೆಗೆ ಮಣಿಪಾಲದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿರುವರು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಭಾಗವಹಿಸಲಿದ್ದು, ದೊಡ್ಡಣ್ಣಗುಡ್ಡೆ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಇವರಿಂದ ಮಾನಸಿಕ ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.