ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣ
Update: 2022-04-19 14:53 GMT
ಬೆಂಗಳೂರು, ಎ.19: ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣದಿಂದ ಎ.22ರಿಂದ ಮೇ 18ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವಾಸಸ್ಥಳದಿಂಧ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಬಿಎಂಟಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಪಾಸುಗಳನ್ನು ನೀಡಿದ್ದರೂ, ಬೇರೆ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಬರೆಯಬೇಕಾಗಿರುತ್ತದೆ. ಹಾಗಾಗಿ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷಾ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.