ಎ.23ರಿಂದ ಆನಂದ ಗಾಣಿಗರ ಸ್ಮರಣಾರ್ಥ ‘ಆನಂದೋತ್ಸವ’

Update: 2022-04-20 13:39 GMT

ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಆನಂದೋತ್ಸವ- 2022ನ್ನು ಎ.23ಮತ್ತು 24ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಎ.೨೩ರಂದು ಸಂಜೆ ೫.೪೫ಕ್ಕೆ ಆನಂದೋತ್ಸವವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಉದ್ಘಾಟಿಸಲಿರುವರು. ಶಿಕ್ಷಣ ತಜ್ಞ, ರಾಷ್ಟ್ರೀಯ ಸಂಶೋಧನಾ ಪ್ರಾಧ್ಯಾಪಕ ಡಾ.ಎಂ.ಎಸ್.ವಲ್ಲಿಯತ್ತನ್ ಅಧ್ಯಕ್ಷತೆ ವಹಿಸಲಿರುವರು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನಿಂದ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ‘ಸಂಸ್ಕೃತಿ ಸಾಧಕ ಪ್ರಶಸ್ತಿ’ಯನ್ನು ಮಣಿಪಾಲ ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ರಿಗೆ ಪ್ರದಾನ ಮಾಡಲಾಗು ವುದು. ರಂಗಕರ್ಮಿ ಪ್ರೊ.ಎಂ.ಎಲ್.ಸಾಮಗ ಅಭಿನಂದನಾ ಭಾಷಣ ಮಾಡಲಿರುವರು. ಬಳಿಕ ಚಿತ್ತಾರ ಬೆಂಗಳೂರು ತಂಡದಿಂದ ‘ನಾಯಿ ಕಳೆದಿದೆ’ ಎಂಬ ನಾಟಕ ಪ್ರದರ್ಶನ ನಡೆಯಲಿದೆ.

ಎ.೨೪ರಂದು ಸಂಜೆ ೫.೪೫ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಭಾಗವಹಿಸಲಿರುವರು. ಬಳಿಕ ರಂಗಭೂಮಿ ಸಂಸ್ಥೆಯ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ನಡೆದ ವಿಶ್ವ ಕನ್ನಡ ನಾಟಕ ರಚನಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನಿತ ಕೃತಿ ಮೌನೀಶ್ ಬಡಿಗೇರ ಅವರ ‘ವಿಶಾಂಕೇ’ ನಾಟಕ ಪ್ರದರ್ಶನ ವನ್ನು ರಂಭೂಮಿ ಕಲಾವಿದರು ನೀಡಲಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಜೊತೆ ಕಾರ್ಯದರ್ಶಿ ಶ್ರೀಪಾದ ಹೆಗಡೆ, ವಿವೇಕಾನಂದ, ಆನಂದ ಮೆಲಂಟ್ಟ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News