ದಿಲ್ಲಿ: ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

Update: 2022-04-21 04:37 GMT

ಹೊಸದಿಲ್ಲಿ: ಪೂರ್ವ ದಿಲ್ಲಿಯಲ್ಲಿ ಬುಧವಾರ ಸಂಜೆ ಸ್ಥಳೀಯ ಬಿಜೆಪಿ ನಾಯಕನನ್ನು ಆತನ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಜಿತು ಚೌಧರಿ ಎಂದು ಗುರುತಿಸಲಾಗಿದ್ದು ಅವರಿಗೆ  42 ವರ್ಷ ವಯಸ್ಸಾಗಿತ್ತು.

ಮಯೂರ್ ವಿಹಾರ್ 3 ನೇ ಹಂತದಲ್ಲಿ  ಮನೆಯ ಮುಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಿಜೆಪಿ ನಾಯಕನ ಶವವನ್ನು ಪೊಲೀಸ್ ಪೇದೆಯೊಬ್ಬರು ಪತ್ತೆ ಹಚ್ಚಿದ್ದರು.

ಮೃತ ವ್ಯಕ್ತಿಗೆ  ಗುಂಡೇಟಿನ ಗಾಯಗಳಾಗಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೂಡಲೇ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ವೈದ್ಯರು  ಬಿಜೆಪಿ ಮುಖಂಡ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಅಪರಾಧ ನಡೆದ ಸ್ಥಳದಿಂದ ಕೆಲವು ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News