ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

Update: 2022-04-22 06:50 GMT

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 (ಪಿಎಂಎಲ್ ಎ) ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ಹಾಗೂ ಎನ್ ಸಿಪಿ  ನಾಯಕ ನವಾಬ್ ಮಲಿಕ್ ಅವರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಆಲಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸುಪ್ರೀಂಕೋರ್ಟ್  ಮಲಿಕ್‌ಗೆ ತಿಳಿಸಿದೆ.

ಮಲಿಕ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, 1999 ರಲ್ಲಿ ನಡೆದ ಅಪರಾಧಕ್ಕಾಗಿ ಫೆಬ್ರವರಿ 2022 ರಲ್ಲಿ ನವಾಬ್ ಮಲಿಕ್ ಅವರ ಬಂಧನದ ಸಿಂಧುತ್ವವನ್ನು ಪ್ರಶ್ನಿಸಿದರು.

ದಾವೂದ್ ಇಬ್ರಾಹಿಂ ಹಾಗೂ ಭೂಗತ ಜಗತ್ತಿನೊಂದಿಗೆ ನಂಟು ಹೊಂದಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ತನಿಖೆ ಮಾಡಿದ ನಂತರ ಫೆಬ್ರವರಿ 23 ರಂದು ಬಂಧಿಸಿತ್ತು.

ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ "ಇದು ಅತ್ಯಂತ ಆರಂಭಿಕ ಹಂತವಾಗಿದೆ. ನಾವು ಹಸ್ತಕ್ಷೇಪ ಮಾಡುವುದು ಸೂಕ್ತವಲ್ಲ. ನೀವು ಸೂಕ್ತವಾದ ನ್ಯಾಯಾಲಯದ ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News