ಆನಂದೋತ್ಸವ: ಡಾ.ಎಚ್.ಎಸ್.ಬಲ್ಲಾಳ್‌ಗೆ ‘ಸಂಸ್ಕೃತಿ ಸಾಧಕ’ ಪ್ರಶಸ್ತಿ ಪ್ರದಾನ

Update: 2022-04-24 10:59 GMT

ಉಡುಪಿ : ರಂಗಭೂಮಿ ಉಡುಪಿ ವತಿಯಿಂದ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಎರಡು ದಿನಗಳ ಆನಂದೋತ್ಸವ ಕಾರ್ಯಕ್ರಮವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಜಿ.ಶಂಕರ್ ಶನಿವಾರ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನಿಂದ ರಂಗಭೂಮಿ ಮೂಲಕ ಕೊಡಮಾಡುವ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿಯನ್ನು ಮಾಹೆಯ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ದಂಪತಿಗೆ ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಂಶೋಧನ ಪ್ರಾಧ್ಯಾಪಕ ಡಾ.ಎಂ.ಎಸ್. ವಲ್ಲಿಯತ್ತನ್ ವಹಿಸಿದ್ದರು.

ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಹಿರಿಯ ರಂಗಕರ್ಮಿ ಪ್ರೊ.ಎಂ.ಎಲ್.ಸಾಮಗ, ಕೆಎಂಸಿ ಆಸ್ಪತ್ರೆಯ ನಿವೃತ್ತ ಡೀನ್ ಡಾ.ಪಿ.ಎಲ್.ಎನ್.ರಾವ್, ಉದ್ಯಮಿ ಪುರುಷೋತ್ತಮ ಶೆಟ್ಟಿ, ರಂಗಭೂಮಿಯ ಮಾರ್ಗದರ್ಶಕ ಡಾ.ಎಚ್.ಶಾಂತಾರಾಮ್, ಎಂಜಿಎಂ ಕಾಲೇಜಿನ ಪ್ರಾಂಶು ಪಾಲ ಡಾ.ದೇವಿದಾಸ್ ನಾಯ್ಕ್, ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಜತೆ ಕಾರ್ಯದರ್ಶಿ ಶ್ರೀಪಾದ ಹೆಗಡೆ, ಸಂಸ್ಥೆಯ ವಿವೇಕಾನಂದ, ಕಾರ್ಯಕಾರಿ ಮಂಡಳಿ ಸದಸ್ಯ ಆನಂದ ಮೇಲಂಟ ಭಾಗವಹಿಸಿ ದ್ದರು. ಬಳಿಕ ಚಿತ್ತಾರ ಬೆಂಗಳೂರು ತಂಡದಿಂದ ‘ನಾಯಿ ಕಳೆದಿದೆ’ ನಾಟಕ ಪ್ರದರ್ಶನಗೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News