ಉಪ್ಪಳ: ಬಿಂದಿಗೆ ತೆಗೆಯುವ ಯತ್ನದಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು
Update: 2022-04-25 11:49 GMT
ಕಾಸರಗೋಡು : ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಇಂದು ಬೆಳಿಗ್ಗೆ ಉಪ್ಪಳ ದಲ್ಲಿ ನಡೆದಿದೆ.
ಉಪ್ಪಳ ಬಪ್ಪಾಯಿತೊಟ್ಟಿಯ ಮುಹಮ್ಮದ್ ಹಾರಿಸ್ (45) ಮೃತ ಪಟ್ಟವರು ಎಂದು ತಿಳಿದು ಬಂದಿದೆ.
ಬಾವಿಗೆ ಬಿದ್ದಿದ್ದ ಬಿಂದಿಗೆಯನ್ನು ತೆಗೆಯಲು ಮನೆಯ ಬಾವಿಗೆ ಇಳಿಯುತ್ತಿದ್ದಾಗ ಕಾಲು ಜಾರಿ ಬಾವಿಗೆ ಬಿದ್ದಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತ ಪಟ್ಟಿದ್ದರು ಎಂದು ತಿಳಿದು ಬಂದಿದೆ.
ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ