ತಮಿಳುನಾಡು: ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

Update: 2022-04-27 07:55 GMT
Photo:ANI

ಚೆನ್ನೈ: ನಗರದ ರಾಜೀವ್ ಗಾಂಧಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ.

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

“ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿನ ಎಲ್ಲ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.  ಹೊಸ ಮೂರು ಬ್ಲಾಕ್ ಗಳು ಬೆಂಕಿಯಿಂದ ಸುರಕ್ಷಿತವಾಗಿವೆ. ಇಲ್ಲಿಯ ತನಕ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲ ಎಂದು ತಮಿಳುನಾಡಿನ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ ಐ ಟ್ವೀಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News