​ಅಲೆವೂರು ಗ್ರಾಪಂನ ಖಾಲಿ ಸ್ಥಾನಕ್ಕೆ ಚುನಾವಣೆ

Update: 2022-04-28 15:12 GMT

ಉಡುಪಿ : ತೆರವಾಗಿರುವ ಅಲೆವೂರು ಗ್ರಾಪಂನ ಒಂದು ಸ್ಥಾನಕ್ಕೆ ರಾಜ್ಯ ಚುನಾವಣಾ ಆಯೋಗವು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದ್ದು, ಮೇ 5ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ.

ಈ ಸ್ಥಾನಕ್ಕೆ ನಾಮಪತ್ರಗಳನ್ನು ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು,  ಮೇ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.  ಮೇ 13 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.  ಮೇ 20ರಂದು ಬೆಳಗ್ಗೆ ೭ರಿಂದ ಸಂಜೆ ೫ರವರೆಗೆ ಮತದಾನ ನಡೆಯಲಿದೆ. ಮೇ೨೨ರಂದು  ಮತ ಎಣಿಕೆ ನಡೆಯಲಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ ೫ರಿಂದ ೨೨ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News