ಸಾಮೂಹಿಕ ಸರಳ ವಿವಾಹ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Update: 2022-04-28 15:14 GMT

ಉಡುಪಿ, ಎ.೨೮: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿ ಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ 50 ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಅರ್ಜಿ ನಮೂನೆಯನ್ನು ಇಲಾಖಾ ವೆಬ್‌ಸೈಟ್ - www.sw.kar.nic.in- ನಲ್ಲಿ ಸಲ್ಲಿಸಿ ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಕಛೇರಿಗೆ ನೀಡಬೇಕೆಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ:೦೮೨೦-೨೫೭೪೮೯೨ನ್ನು ಸಂಪರ್ಕಿ ಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News