ಬ್ರಹ್ಮಾವರ: ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ
Update: 2022-04-28 16:06 GMT
ಬ್ರಹ್ಮಾವರ : ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಓಂಕಾರ್ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಮತ್ತು ಗ್ರಾಹಕ ಸೇವಾ ಕೇಂದ್ರದ ಉದ್ಘಾಟನೆ ಇಲ್ಲಿ ಜರಗಿತು.
ವಾರಂಬಳ್ಳಿ ಗ್ರಾಪಂ ಅಧ್ಯಕ್ಷೆ ಗುಲಾಬಿ ಕಚೇರಿ ಉದ್ಘಾಟಿಸಿ ಶುಭ ಹಾರೈಸಿದರು. ಉಪಾಧ್ಯಕ್ಷ ಸದಾನಂದ ಪೂಜಾರಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾಪಂಚಾಯತ್‌ನ ಎನ್‌ಆರ್‌ಎಲ್‌ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮಾತನಾಡಿ, ಓಂಕಾರ್ ಸಂಜೀವಿನಿ ಒಕ್ಕೂಟದ ಮಹಿಳೆಯರ ಉತ್ಸಾಹ ಮತ್ತು ಸಂಜೀವಿನಿ ಕೆಫೆ ನಡೆಸುವ ಮೂಲಕ ಉದ್ಯಮ ಕ್ಷೇತ್ರಕ್ಕೂ ಕಾಲಿಟ್ಟಿರುವುದನ್ನು ಶ್ಲಾಘಿಸಿದರು.
ಓಂಕಾರ್ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಬೇಬಿ, ಗ್ರಾಪಂ ಕಾರ್ಯದರ್ಶಿ ಶೇಖರ ನಾಯ್ಕ, ವಲಯ ಮೇಲ್ವಿಚಾರಕ ಸಂತೋಷ್ ಮತ್ತಿತರರು ಹಾಜರಿದ್ದರು. ಒಕ್ಕೂಟದ ಕಾರ್ಯದರ್ಶಿ ರೇಖಾ ಸ್ವಾಗತಿಸಿ ನಿರೂಪಿಸಿದರು. ಬಿ.ಸಿ.ಅರ್ಚನಾ ವಂದಿಸಿದರು