ಪ್ರಧಾನಿ ಮೋದಿ ಜಮ್ಮು-ಕಾಶ್ಮೀರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ: ಭಾರತ ತಿರುಗೇಟು

Update: 2022-04-29 04:42 GMT

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು-ಕಾಶ್ಮೀರ ಭೇಟಿಯ ಕುರಿತು ಪಾಕಿಸ್ತಾನದ ಟೀಕೆಗಳನ್ನು ಭಾರತ ಗುರುವಾರ ಖಂಡಿಸಿದೆ ಹಾಗೂ  ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ಇಸ್ಲಾಮಾಬಾದ್‌ಗೆ ಯಾವುದೇ ಹಕ್ಕಿಲ್ಲ  ಎಂದು ಹೇಳಿದೆ.

ನಿಯಮಿತ ಮಾಧ್ಯಮಗೋಷ್ಠಿಯಲ್ಲಿ ಪಾಕಿಸ್ತಾನದ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಪ್ರಧಾನಿಗೆ ದೊರೆತ ಸ್ವಾಗತ ಹಾಗೂ  ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದಿರುವ ಬದಲಾವಣೆಗಳು ಭೇಟಿಯ ಬಗ್ಗೆ ಯಾವುದೇ ಪ್ರಶ್ನೆಗಳಿಗೆ ಸ್ಪಷ್ಟ ಉತ್ತರವಾಗಿದೆ ಎಂದು ಹೇಳಿದರು.

ಅವರು (ಪ್ರಧಾನಿ ಮೋದಿ) ಪಡೆದ ಸ್ವಾಗತ ಹಾಗೂ  ನೀವು ನೋಡಿದ ದೃಶ್ಯಗಳು, ಅವರು ಉದ್ಘಾಟಿಸಿದ ಅಭಿವೃದ್ಧಿ ಯೋಜನೆಗಳು ,ಕಾಶ್ಮೀರದಲ್ಲಾಗುತ್ತಿರುವ ಬದಲಾವಣೆಗಳು  ಭೇಟಿಯ ಬಗ್ಗೆ  ಯಾವುದೇ ಪ್ರಶ್ನೆಗಳಿಗೆ ಬಹಳ ಸ್ಪಷ್ಟವಾದ ಉತ್ತರವಾಗಿದೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಗುತ್ತಿದೆ ಎಂಬುದರ ಕುರಿತು ಪಾಕಿಸ್ತಾನದ ದೃಷ್ಟಿಕೋನದಿಂದ ಮಾತನಾಡಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ ಎಂದು ನಾನು ಭಾವಿಸುತ್ತೇನೆ ಆದರೆ ಯಾರಾದರೂ ಭೇಟಿಯನ್ನು ಪ್ರಶ್ನಿಸಿದರೆ ನಾನು ಉತ್ತರಿಸುತ್ತೇನೆ ”ಎಂದು ಅವರು ಹೇಳಿದರು.

ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ರವಿವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು ಮತ್ತು ದೇಶಾದ್ಯಂತ ಎಲ್ಲಾ ಗ್ರಾಮ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News