ಉಡುಪಿ: ಕಲಾತಂಡಗಳಿಂದ ಅರ್ಜಿ ಆಹ್ವಾನ

Update: 2022-05-02 13:43 GMT

ಉಡುಪಿ : ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿಯನ್ನು ನಿರ್ಮೂಲನೆ ಮಾಡಲು ಎಂ.ಎಸ್.ಕಾಯ್ದೆ ೨೦೧೩ರ ಪ್ರಮುಖ ಅಂಶಗಳ ಬಗ್ಗೆ ಸಾರ್ವಜನಿಕರು ಹಾಗೂ ಕಾರ್ಮಿಕರಲ್ಲಿ ಅರಿವು ಮೂಡಿಸಲು ೬೦ ನಿಮಿಷಗಳ ಅವಧಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟಗಳ ರಂಗಮಂದಿರ ಅಥವಾ ಒಳಾಂಗಣದಲ್ಲಿ ಕಲಾತಂಡದವರಿಂದ ನಾಟಕಗಳನ್ನು ಪ್ರರ್ದಶಿಸಲು ಅರ್ಹ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಪೌರಕಾರ್ಮಿಕರು, ಸಫಾಯಿ ಕರ್ಮಚಾರಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಂದ ಕಲಾ ತಂಡ ರಚಿತವಾಗಿರಬೇಕು. ಪೌರ ಕಾರ್ಮಿಕ ತಂಡಗಳಿಗೆ ಆಧ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸುವ ಕಲಾತಂಡಗಳು ಸೂಕ್ತ ದಾಖಲೆಗಳೊಂದಿಗೆ ಮೇ ೯ರ ಸೋಮವಾರ ಸಂಜೆ ೪ ಗಂಟೆಯೊಳಗೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ, ನಂ.೧/೧೪, ದಕ್ಷಿಣ ವಿಂಗ್, ನೆಲಹಮಹಡಿ, ಯೂನಿಟಿ ಬಿಲ್ಡಿಂಗ್ ಕಾಂಪ್ಲೆಕ್ಸ್, ಮಿಷನ್ ರೋಡ್, ಬೆಂಗಳೂರು ಇಲ್ಲಿ ಸಲ್ಲಿಸಬಹುದು. 

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ: ೦೮೦-೨೨೨೪೦೪೪೫/೬ ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News