ಹಿಂದೂ ಧರ್ಮದ ಬೆಳವಣಿಗೆಗೆ ಶಂಕರಾಚಾರ್ಯರ ಕೊಡುಗೆ ಅಪಾರ: ಉಡುಪಿ ಅಪರ ಜಿಲ್ಲಾಧಿಕಾರಿ ವೀಣಾ

Update: 2022-05-06 15:21 GMT

ಉಡುಪಿ : ಸನಾತನ ಹಿಂದೂ ಧರ್ಮದ ಉಳಿವು ಮತ್ತು ಬೆಳವಣಿಗೆ ಯಲ್ಲಿ ಶಂಕರಾಚಾರ್ಯರು ನೀಡಿರುವ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಹೇಳಿದ್ದಾರೆ.  

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್‌ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಸಾರ್ವಜನಿಕರಲ್ಲಿ ಭಕ್ತಿಯ ಭಾವನೆ ತುಂಬುವ ಮೂಲಕ ಹಾಗೂ ದೇವಾಲಯಗಳ ಸ್ಥಾಪನೆ ಮೂಲಕ ಹಿಂದೂ ಧರ್ಮದ ಬೆಳವಣಿಗೆಗೆ ಕೊಡುಗೆ ನೀಡಿದ್ದ ಶಂಕರಾಚಾರ್ಯರು, ದೇಶದಾದ್ಯಂತ ಸ್ಥಾಪಿಸಿದ ೪ ಪೀಠಗಳ ಮೂಲಕ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ಮೂಡಿಸಿದ್ದಾರೆ. ಧರ್ಮದ ಏಳಿಗೆಗೆ ಶ್ರಮಿಸಿದ ಎಲ್ಲಾ ಸಮಾಜ ಸುಧಾರಕರು, ಜನರಲ್ಲಿದ್ದ ಮೂಢ ನಂಬಿಕೆಗಳನ್ನು ತೊಡೆದು ಹಾಕಿ, ವೈಚಾರಿಕತೆಯನ್ನು ಮೂಡಿಸಿ, ಪ್ರಜ್ಞಾ ವಂತರನ್ನಾಗಿ ಮಾಡಿದ್ದು, ಶಂಕರಾಚಾರ್ಯರ ತತ್ವಗಳು ಐಕ್ಯತೆ ಮೂಡಿಸುವಲ್ಲಿ ಸಹಕಾರಿಯಾಗಿವೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಕಿರಣ್ ಮಂಜನಬೈಲು ಮಾತನಾಡಿ, ಭಕ್ತಿ ಸಿದ್ಧಾಂತದ ಪ್ರತಿಪಾದನೆ ಮಾಡಿದ ಶಂಕರಾಚಾರ್ಯರು, ಆತ್ಮ ಪರಮಾತ್ಮನ ಬೇಧವಿಲ್ಲದೇ ಪ್ರತಿಯೊಬ್ಬರೂ ಮೋಕ್ಷ ಪಡೆಯಲು ಅವಕಾಶವಿದ್ದು, ದೇವರು ಒಬ್ಬನೇ ಎಂದು ಸಾರಿದ್ದರು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಗೂ ಇತರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ ಕೊನೆಯಲ್ಲಿ  ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News