ಪಿ.ಎಂ ಕಿಸಾನ್ ಯೋಜನೆ: ಇ-ಕೆವೈಸಿ ಕಡ್ಡಾಯ
Update: 2022-05-06 15:21 GMT
ಉಡುಪಿ : ಕೃಷಿ ಇಲಾಖೆಯ ವತಿಯಿಂದ ಕೇಂದ್ರ ಸರಕಾರದ ಪಿ.ಎಂ ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ಜಿಲ್ಲೆಯ ಎಲ್ಲಾ ಫಲಾನುಭವಿ ರೈತರು ಮೇ ೩೧ರೊಳಗೆ ಹತ್ತಿರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಇ-ಕೆವೈಸಿ ಮಾಡಿಸಿ ಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.