ಮೇ 7ರಂದು ಸ್ಮತಿವನ ನಿರ್ಮಾಣಕ್ಕೆ ಶಂಕುಸ್ಥಾಪನೆ

Update: 2022-05-06 15:23 GMT

ಉಡುಪಿ : ಅರಣ್ಯ ಇಲಾಖೆ ಹಾಗೂ ಶ್ರೀ ಪೇಜಾವರ ಮಠದ  ಸಹಯೋಗದಲ್ಲಿ ಪೇಜಾವರ ಮಠದ ಶ್ರೀವಿಶ್ವೇಶ್ವರ ತೀರ್ಥರ ಗೌರವಾರ್ಥ ಸ್ಮತಿವನ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಯು  ಮೇ ೭ ರಂದು ಬೆಳಗ್ಗೆ ೯:೩೦ಕ್ಕೆ ಬ್ರಹ್ಮಾವರ ತಾಲೂಕು ನೀಲಾವರದ ಗೋವರ್ಧನಗಿರಿ ಗೋಶಾಲೆಯಲ್ಲಿ ನಡೆಯಲಿದೆ.

ಪೇಜಾವರ ಮಠದ ಶ್ರೀವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ರಾಜ್ಯ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿರುವರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News