ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಧುಲಿಯಾ ಮತ್ತು ಪರ್ದಿವಾಲಾ ನೇಮಕ

Update: 2022-05-07 18:20 GMT

 

ಹೊಸದಿಲ್ಲಿ,ಮೇ 7: ಸರ್ವೋಚ್ಚ ನ್ಯಾಯಾಲಯಕ್ಕೆ ಶನಿವಾರ ಇಬ್ಬರು ನ್ಯಾಯಾಧೀಶರನ್ನು ನೇಮಕಗೊಳಿಸಲಾಗಿದೆ. ಮುಂದಿನ ವಾರ ಅವರ ಪ್ರಮಾಣವಚನ ಸ್ವೀಕಾರದೊಂದಿಗೆ ಸರ್ವೋಚ್ಚ ನ್ಯಾಯಾಲಯವು 34 ನ್ಯಾಯಾಧೀಶರ ತನ್ನ ಪೂರ್ಣ ಸಾಮರ್ಥ್ಯವನ್ನು ಪಡೆದುಕೊಳ್ಳಲಿದೆ.

ಗುವಾಹಟಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಸುಧಾಂಶು ಧುಲಿಯಾ ಮತ್ತು ಗುಜರಾತ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಜಮ್ಷೆಡ್ ಬುರ್ಜೋರ್ ಪರ್ದಿವಾಲಾ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ಪದೋನ್ನತಿಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು. ಕೇಂದ್ರ ಕಾನೂನು ಸಚಿವಾಲಯವು ಶನಿವಾರ ಎರಡು ಪ್ರತ್ಯೇಕ ಅಧಿಸೂಚನೆಗಳಲ್ಲಿ ಅವರ ನೇಮಕಾತಿಯನ್ನು ಪ್ರಕಟಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News