ಗುಜರಾತ್: ಪಂಚಮಹಲ್ ನಲ್ಲಿ ಕೋಮು ಘರ್ಷಣೆ; 7 ಮಂದಿ ಬಂಧನ

Update: 2022-05-10 09:03 GMT

ಅಹಮದಾಬಾದ್: ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಕಾಲೋಲ್ ಪಟ್ಟಣದಲ್ಲಿ ಸಣ್ಣ ವಿಷಯಕ್ಕೆ ಎರಡು ವಿಭಿನ್ನ ಸಮುದಾಯಗಳ ಕೆಲವು ಸದಸ್ಯರು ಘರ್ಷಣೆ ನಡೆಸಿದರು. ಆ ನಂತರ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಎಚ್ಚೆತ್ತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಿಮಾಂಶು ಸೋಲಂಕಿ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

 “ಹಿಂದೂಗಳು ಹಾಗೂ  ಮುಸ್ಲಿಮರು ಇಬ್ಬರೂ ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ಎರಡು ಸಮುದಾಯಗಳ ಕೆಲವು ಸದಸ್ಯರು ಮದುವೆಯ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕೆಲವು ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ನಡುವೆ ಮಾತಿನ ಚಕಮಕಿ ನಡೆದ ನಂತರ, ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆಯಿತು” ಎಂದು ಅಧಿಕಾರಿಯೊಬ್ಬರು ಹೇಳಿದರು.

ಘಟನಾ ಸ್ಥಳದಿಂದ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕಾಲೋಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಂ.ಕೆ.ಮಾಳವೀಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News