​ಪಡಿತರ ಚೀಟಿಗೆ ಇ-ಕೆವೈಸಿ: ಮೇ 20 ಕೊನೆಯ ದಿನ

Update: 2022-05-11 15:30 GMT

ಉಡುಪಿ : ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ಮೇ 20ರೊಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು (ಆಧಾರ ದೃಢೀಕರಣ ಇ-ಕೆವೈಸಿ) ಅಂತಿಮ ಅವಕಾಶ ಕಲ್ಪಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಸರಕಾರದ ಆದೇಶದಂತೆ ಮೇ ೨೦ರೊಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಯ ಸದಸ್ಯರ ಹೆಸರನ್ನು ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News