ಉದ್ಯಾವರ ಬಳಿ ಬಸ್ ಪಲ್ಟಿ; ಹಲವರಿಗೆ ಗಾಯ
Update: 2022-05-12 10:18 GMT
ಉದ್ಯಾವರ: ಉಡುಪಿ ಸಮೀಪದ ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದು ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಬಸ್ಸಿನಲ್ಲಿದ್ದ 20 ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿಯಿಂದ ಮಂಗಳೂರಿಗೆ ತೆರಳುತಿದ್ದ ಖಾಸಗಿ ಬಸ್ ಇದಾಗಿದ್ದು ಮಳೆಗೆ ಸ್ಕಿಡ್ ಆಗಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಎಪಿಎಂ ಕಂಪೆನಿಗೆ ಸೇರಿದ ಈ ಬಸ್ ನಲ್ಲಿ ಹಲವು ಪ್ರಯಾಣಿಕರಿದ್ದರು. ಬೆಳಿಗ್ಗಿನಿಂದಲೇ ಹನಿ ಮಳೆ ಬರುತ್ತಿರುವುದರಿಂದ ಬಸ್ ಗೆ ಬ್ರೇಕ್ ಹಾಕುವಾಗ ಸ್ಕಿಡ್ ಆಯ್ತು ಎನ್ನಲಾಗಿದೆ. ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.