ವರ್ಗಾವಣೆಗೊಂಡ ಉಡುಪಿಯ ನಾಲ್ವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

Update: 2022-05-16 14:12 GMT

ಉಡುಪಿ : ಉಡುಪಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಉಡುಪಿ ನ್ಯಾಯಾಲಯದಿಂದ ವರ್ಗಾವಣೆಗೊಂಡ ನಾಲ್ವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭವು ಉಡುಪಿ ವಕೀಲರ ಸಂಘದ ಕಚೇರಿಯಲ್ಲಿ  ಸೋಮವಾರ ಜರಗಿತು.

ವರ್ಗಾವಣೆಗೊಂಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್., ಜಿಲ್ಲಾ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಎರ್ಮಾಳು, ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಂತೇಶ್ ಭುಸಗೋಳ್, ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧಿಶೆ ನಿರ್ಮಲಾ ಎಂ.ಸಿ. ಅವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್. ಮಾತನಾಡಿ, ವಕೀಲರೊಬ್ಬರು ಭಾಗಿಯಾದ ಚೆಕ್ ಹಗರಣ, ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ತೀರ್ಪನ್ನು ಆತ್ಮಸಾಕ್ಷಿಗೆ ಅನುಗುಣವಾಗಿ ಹಾಗೂ ನ್ಯಾಯಾಂಗದ ಗೌರವ ಎತ್ತಿ ಹಿಡಿಯುವ ನಿಟ್ಟಿನಲ್ಲಿ ನೀಡಿದ್ದೇನೆ. ವಕೀಲರ ನೂತನ ಭವನ ನಿರ್ಮಾಣದ ಪ್ರಸ್ತಾವನೆಯನ್ನು ಹೈಕೋರ್ಟಿಗೆ ಕಳುಹಿಸಿಕೊಡಲಾಗಿದೆ ಎಂದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಶುಭಾ ಶಂಸನೆಗೈದರು. ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ರವಿ ಅರಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು. ನ್ಯಾಯವಾದಿ ರಾಜಶೇಖರ ಶ್ಯಾಮರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News