ಅಪಘಾತ; ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಮೃತ್ಯು
ಬೈಂದೂರು: ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಹಿಂಬದಿ ಸವಾರೆ ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮಂಗಳವಾರ ನಡೆದಿದೆ.
ಇವರು ಇಂದು ಬೆಳಗ್ಗೆ ಗ್ರಾಮ ಪಂಚಾಯತ್ ಗೆ ಬಂದು ಸಭೆ ಮುಗಿಸಿಕೊಂಡು ಮಧ್ಯಾಹ್ನ ಊಟಕ್ಕೆ ಮುರೂರು ನಲ್ಲಿ ಇರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿಯಲ್ಲಿ ಕುಳಿತು ಹೋಗುತ್ತಿದ್ದರು.
ಈ ವೇಳೆ ಬೈಕ್ ಆಕಸ್ಮಿಕ ವಾಗಿ ಸ್ಕಿಡ್ ಆಗಿ ರಸ್ತೆಗೆ ಬಿತ್ತೆನ್ನಲಾಗಿದೆ, ಇದರಿಂದ ಹಿಂಬದಿಯಲ್ಲಿ ಕುಳಿತ ಲಲಿತಾ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಕುಂದಾಪುರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇವರು ಕಾಲ್ತೋಡು ಗ್ರಾಮ ಪಂಚಾಯತ್ ಗೆ ಸದಸ್ಯರಾಗಿ 2ನೇ ಭಾರೀ ಆಯ್ಕೆ ಆಗಿದ್ದು, ಪ್ರಸ್ತುತ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 10 ವರ್ಷಗಳ ಕಾಲ ಕಾಲ್ತೋಡು ಭಾಗದಲ್ಲಿ ಆಶಾ ಕಾರ್ಯಕರ್ತೆ ಆಗಿ ಸೇವೆ ಸಲ್ಲಿಸಿದ್ದರು.