ಮೇ 20ರಂದು ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ: ಡಿಸಿ ಕೂರ್ಮಾರಾವ್
Update: 2022-05-19 16:27 GMT
ಉಡುಪಿ, ಮೇ 19: ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರು ವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ 20ರ ಶುಕ್ರವಾರ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಿಸಿದ್ದಾರೆ.