ಹೂಡೆ ಸಾಲಿಹಾತ್ ಕಾಲೇಜಿನ ಪ್ರವೇಶಾತಿ ಆರಂಭ

Update: 2022-05-22 11:48 GMT

ಉಡುಪಿ : ತೋನ್ಸೆ - ಹೂಡೆಯ ಮಹಮ್ಮದೀಯ ಎಜುಕೇಶನಲ್ ಟ್ರಸ್ಟ್‌ನ ಅಧೀನದಲ್ಲಿ ನಡೆಯುತ್ತಿರುವ ಸಾಲಿಹಾತ್ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಮತ್ತು ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ ಹಾಗೂ ಬಿ.ಎ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದೆ.

ಈ ಶಿಕ್ಷಣ ಸಂಸ್ಥೆಯೊಂದಿಗೆ ನರ್ಸರಿ, ಎಲ್.ಕೆ.ಜಿ.ಯಿಂದ ಹಿಡಿದು ೧೦ನೇ ತರಗತಿಯವರೆಗೆ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆ ನಡೆಯುತ್ತಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಪದವಿ ತರಗತಿಗಳಲ್ಲಿ ಉತ್ತಮ ಫಲಿತಾಂಶ ದಾಖಲಿಸಿದೆ. ವಿಶೇಷವಾಗಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ  ಸಾಲಿಹಾತ್ ಕಾಲೇಜ್, ಗುಣಮಟ್ಟದ ಶಿಕ್ಷಣ ನೀಡುತ್ತ ಬಂದಿದೆ.

ಉತ್ತಮ ಗ್ರಂಥಾಲಯ, ವಿಶಾಲವಾದ ಆಟದ ಮೈದಾನ, ಸುಸಜ್ಜಿತ ಕಟ್ಟಡ, ಸಭಾಂಗಣ, ಕಂಪ್ಯೂಟರ್ ಕೊಠಡಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಹೊಂದಿದೆ. ದೂರದ ಸಾಸ್ತಾನ ಹಾಗೂ ಉದ್ಯಾವರದಿಂದ ಮಕ್ಕಳನ್ನು ಕರೆತರಲು ಶಾಲಾ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ತರಗತಿ ಕೋಣೆಗಳಿಗೆ ಸಿ.ಸಿ. ಕ್ಯಾಮರಾ ಅಳವಡಿಸಲಾಗಿದೆ.

ಅನುಭವಿ ಶಿಕ್ಷಕ ವೃಂದವನ್ನು ಹೊಂದಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಇವರ ಪಾತ್ರ ಗಮನಾರ್ಹ ವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ವ್ಯಕ್ತಿತ್ವ ವಿಕಸನದಂತಹ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗುತ್ತದೆ. ವಿಶೇಷವಾಗಿ ಮಕ್ಕಳಿಗೆ ನೈತಿಕ ಶಿಕ್ಷಣವನ್ನು ನೀಡಲಾಗುತ್ತಿದ್ದು, ಮಕ್ಕಳು ಸುಸಂಸ್ಕೃತ ನಾಗರೀಕರಾಗುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಸಾಗುತ್ತಿದೆ.

ವಿದ್ಯಾರ್ಥಿಗಳಿಗೆ ಸರಕಾರದಿಂದ ದೊರೆಯುವ ವಿದ್ಯಾರ್ಥಿವೇತನದ ಸೌಲಭ್ಯ ವನ್ನು ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಶಿಕ್ಷಣವನ್ನು ವ್ಯವಹಾರ ದೃಷ್ಟಿಯಿಂದ ನೋಡದೆ ಸೇವೆಯ ರೂಪದಲ್ಲಿ ನೀಡುತ್ತಿರುವುದು ಈ ಸಾಲಿಹಾತ್ ಶಿಕ್ಷಣ ಸಂಸ್ಥೆಯ ವಿಶೇಷವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News