ಉಡುಪಿ: ನಿಟ್ಟೂರು ಪ್ರೌಢ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ
Update: 2022-05-28 13:26 GMT
ಉಡುಪಿ, ಮೇ 28: ಇಲ್ಲಿನ ನಿಟ್ಟೂರು ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.92ರಷ್ಟು ಸಮಾನ ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಇಬ್ಬರು ವಿದ್ಯಾರ್ಥಿನಿಯರನ್ನು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಶಾಲೆಯ ವಿದ್ಯಾರ್ಥಿನಿಯರಾದ ದೀಪಿಕಾ ಮತ್ತು ನಿಶ್ಚಿತಾ ಇಬ್ಬರೂ ತಲಾ ಶೇ.92ರಷ್ಟು ಅಂಕಗಳನ್ನು ಪಡೆದಿದ್ದು, ಇವರಿಗೆ ಶಾಲೆಯ ಹಳೆ ವಿದ್ಯಾರ್ಥಿನಿಯೊಬ್ಬರ ವತಿಯಿಂದ ತಲಾ 10,000 ರೂ. ನಗದು ನೀಡಿ ಅಭಿನಂದಿಸಲಾಯಿತು.
ನಿಟ್ಟೂರು ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಹಾಗೂ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮುರಲಿ ಕಡೆಕಾರ್ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಅನಸೂಯ ಹಾಗೂ ಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.