ಕನ್ನರ್ಪಾಡಿ ಅಂಬೇಡ್ಕರ್ ಭವನ ಉದ್ಘಾಟನೆ

Update: 2022-05-29 13:26 GMT

ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾ ಯತ್, ಕಡೆಕಾರ್ ಗ್ರಾಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗಿರುವ ನೂತನ ಕನ್ನರ್ಪಾಡಿ ಅಂಬೇಡ್ಕರ್ ಭವನವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ರವಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಡೆಕಾರ್ ಗ್ರಾಪಂ ಅಧ್ಯಕ್ಷ ಸರಸ್ವತಿ, ಉಪಾಧ್ಯಕ್ಷ ನವೀನ್ ಶೆಟ್ಟಿ, ರಾಜ್ಯ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ತಾಪಂ ಮಾಜಿ ಅಧ್ಯಕ್ಷೆ ಶ್ಯಾಮಲಾ ಸುಧಾಕರ್, ನವ್ಯಶ್ರೀ ಮಹಿಳಾ ಮಂಡಳ ಅಧ್ಯಕ್ಷೆ ರತ್ನ ಸುವರ್ಣ, ಶ್ರೀಚನ್ನಬಸವೇಶ್ವರ ಯುವಕ ಮಂಡಲ ಅಧ್ಯಕ್ಷ ಸಂದೀಪ್ ಸುವರ್ಣ, ಚನ್ನಬಸವೇಶ್ವರ ಭಜನಾ ಮಂಡಳಿ ಅಧ್ಯಕ್ಷ ಉದಯ ಸುವರ್ಣ, ಜನಪರ ಹೋರಾಟಗಾರ ಜಯನ್ ಮಲ್ಪೆ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ವಿಜಯಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿದ್ಧೇಶ್ ಎಸ್., ಗ್ರಾಮ ಕರಣಿಕ ವಾಸುದೇವ ಆಚಾರ್ಯ, ಕಡೆಕಾರ್ ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News