ಜೂ.5ಕ್ಕೆ ರಾಜ್ ಸೌಂಡ್ಸ್ ಸಿನೆಮಾ ಆಸ್ಟ್ರೇಲಿಯಾದಲ್ಲಿ ಬಿಡುಗಡೆ

Update: 2022-05-29 13:36 GMT

ಉಡುಪಿ : ವೈಭವ್ ಫ್ಲಿಕ್ಸ್ ಅಡಿಯಲ್ಲಿ ಮ್ಯಾಂಗೋ ಪಿಕಲ್ ಬ್ಯಾನರ್‌ನಲ್ಲಿ ರಾಹುಲ್ ಅಮೀನ್ ನಿರ್ದೇಶನದ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನೆಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಜೂ.5ರಂದು ಆಸ್ಟ್ರೇಲಿಯಾದಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರದ ಸಹನಿರ್ಮಾಪಕ ಸುಹಾನ್ ಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯಾದ್ಯಂತ ಚಿತ್ರ ಬಿಡುಗಡೆಗೊಂಡಿದ್ದು, ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ವರೆಗೆ ೫೦ ಲಕ್ಷಕ್ಕೂ ಅಧಿಕ ಹಣ ಸಂಗ್ರಹವಾಗಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಕುಟುಂಬ ಸಮೇತರಾಗಿ ವೀಕ್ಷಿಸುವ ಚಿತ್ರ ಇದಾಗಿದ್ದು, ಬೆಂಗಳೂರು, ಶುಂಠಿಕೊಪ್ಪದಲ್ಲೂ ಚಿತ್ರ ತೆರೆಕಂಡಿದೆ. ಮುಂದೆ ಮುಂಬೈ, ನೈರೋಪ್ಯ ಸಹಿತ ವಿವಿಧೆಡೆ ಚಿತ್ರ ಬಿಡುಗಡೆಗೊಳಿಸುವ ಉದ್ದೇಶ ಇಟ್ಟುಕೊಂಡಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಟರಾದ ಸಂದೀಪ್ ಶೆಟ್ಟಿ, ಮರ್ವಿನ್ ಶಿರ್ವ, ಅರ್ಪಿತ್ ಅಡ್ಯಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News