ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ 279.03 ಕೋಟಿ ರೂ. ಮಂಜೂರು: ಸಂಸದೆ ಶೋಭಾ ಕರಂದ್ಲಾಜೆ

Update: 2022-06-01 15:33 GMT

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಭೂಸಾರಿಗೆ ಇಲಾಖೆಯು ಒಟ್ಟು 279.03 ಕೋಟಿ ರೂ. ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 169ಎ ರಲ್ಲಿ ಮೇಗರವಳ್ಳಿಯಿಂದ ಆಗುಂಬೆಯವರೆಗೆ ದ್ವಿಪಥ ರಸ್ತೆಯನ್ನಾಗಿ ವಿಸ್ತರಿಸಲು 96.20 ಕೋಟಿ ರೂ., ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮಾಳ ಗೇಟ್‌ನಿಂದ ಕಾರ್ಕಳವರೆಗೆ ಚತುಷ್ಪಥಗೊಳಿಸಲು 177.94 ಕೋಟಿ ರೂ., ರಾಷ್ಟ್ರೀಯ ಹೆದ್ದಾರಿ 766 ಸಿಯಲ್ಲಿ ಬೈಂದೂರು- ರಾಣೆಬೆನ್ನೂರು ವಿಭಾಗದಲ್ಲಿ ರಸ್ತೆ ಸುರಕ್ಷತಾ ಕಾಮಗಾರಿಗೆ 4.89 ಕೋಟಿ ರೂ. ಅನುದಾನಗಳನ್ನು ಮಂಜೂರು ಮಾಡಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಆದೇಶ ಹೊರಡಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News